ರಾಂಚಿ, ಜ 31 (DaijiworldNews/AA): ಜಾರ್ಖಂಡ್ ನ ಮುಖ್ಯಮಂತ್ರಿ ಸ್ಥಾನಕ್ಕೆ ಹೇಮಂತ್ ಸೊರೆನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಬುಧವಾರ ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಅವರನ್ನು ಮಾಡಿದೆ.
ಭೂ ಹಗರಣಕ್ಕೆ ಸಂಬಂಧ ಪಟ್ಟಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಇಡಿ ಹೇಮಂತ್ ಸೊರೆನ್ ಅವರನ್ನು ರಾಂಚಿಯಲ್ಲಿ ವಿಚಾರಣೆ ನಡೆಸುತ್ತಿದೆ. ಜೊತೆಗೆ ತನಿಖೆಯ ಭಾಗವಾಗಿ ಹೇಮಂತ್ ಸೊರೆನ್ ಅವರನ್ನು ಬಂಧಿಸಬಹುದೆಂಬ ಊಹಾಪೋಹದ ನಡುವೆಯೇ ಅವರು ರಾಜೀನಾಮೆ ನೀಡಿದ್ದಾರೆ. ಇನ್ನು ಇವರ ರಾಜೀನಾಮೆಯನ್ನು ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅಂಗೀಕರಿಸಿದ್ದಾರೆ.
ಈ ಬಗ್ಗೆ ಮಾತನಾಡಿದ ಜೆಎಂಎಂ ಸಂಸದ ಮಹುವಾ ಮಾಜಿ ಅವರು ಮುಖ್ಯಮಂತ್ರಿ ಇಡಿ ಕಸ್ಟಡಿಯಲ್ಲಿದ್ದಾರೆ. ಇಡಿ ತಂಡದೊಂದಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ತೆರಳಿದ್ದಾರೆ. ಚಂಪೈ ಸೊರೆನ್ ನೂತನ ಮುಖ್ಯಮಂತ್ರಿಯಾಗಲಿದ್ದಾರೆ. ನಮ್ಮ ಬಳಿ ಸಂಖ್ಯಾಬಲವಿದೆ ಎಂದು ಹೇಳಿದ್ದಾರೆ. ಇನ್ನು ಜಾರ್ಖಂಡ್ ಸಚಿವ ಮತ್ತು ಜೆಎಂಎಂ ನಾಯಕ ಮಿಥಿಲೇಶ್ ಠಾಕೂರ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ನಾವು ನಮ್ಮ ನಾಯಕನನ್ನು ಆಯ್ಕೆ ಮಾಡಿದ್ದೇವೆ. ನಮ್ಮ ಮುಖ್ಯಮಂತ್ರಿ ಚಂಪೈ ಸೊರೆನ್ ಆಗಿರುತ್ತಾರೆ ಎಂದು ಹೇಳಿದ್ದಾರೆ.