ನವದೆಹಲಿ, ಫೆ 01 (DaijiworldNews/AA): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ ನಲ್ಲಿ ಬಹುನಿರೀಕ್ಷಿತ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ.
ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದ್ದು, ಬೆಳಗ್ಗೆ 11 ಗಂಟೆಗೆ ಬಜೆಟ್ ಭಾಷಣ ಪ್ರಾರಂಭಿಸಲಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ಕೊನೆಯ ಬಜೆಟ್ ಇದಾಗಿದೆ.
ಲೋಕಸಭೆ ಚುನಾವಣೆಗೆ ಮುಂಚಿನ ಬಜೆಟ್ ಇದಾಗಿರುವುದರಿಂದ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಇನ್ನು ಚುನಾವಣೆ ಬಳಿಕ ಹೊಸ ಸರ್ಕಾರದಿಂದ ಮತ್ತೆ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುತ್ತದೆ. ಇದರಿಂದ ಆಡಳಿತಾರೂಢ ಪಕ್ಷದ ಮುಂದಿನ ದಾರಿ ಬಗ್ಗೆ ಸ್ಪಷ್ಟ ಚಿತ್ರಣ ದೊರೆಯಲಿದೆ.