ನವದೆಹಲಿ, ಫೆ 01 (DaijiworldNews/HR): ಭಾರತದ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿದ ಅವರು, ಭಾರತದ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದರು.
ಇನ್ನು ಮುಂದಿನ ಐದು ವರ್ಷಗಳಲ್ಲಿ 3 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ. ಭಾರತದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದಿದ್ದಾರೆ.