ರಾಂಚಿ, ಫೆ 01 (DaijiworldNews/MS): ಭೂ ವಂಚನೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಯದ ಅಧಿಕಾರಿಗಳಿಂದ ಬಂಧಿತರಾಗಿರುವ ಜಾರ್ಖಂಡ್ ನ ಜೆಎಂಎಂ ನಾಯಕ, ಮಾಜಿ ಸಿಎಂ ಹೇಮಂತ್ ಸೊರೆನ್ ಅವರಿಗೆ ನ್ಯಾಯಾಲಯ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಿದೆ.
ಇಡಿ ಜಾರ್ಖಂಡ್ನ ಮಾಜಿ ಸಿಎಂ ಹೇಮಂತ್ ಸೊರೆನ್ರನ್ನು 10 ದಿನಗಳ ರಿಮಾಂಡ್ ನೀಡುವಂತೆ ಒತ್ತಾಯಿಸಿತ್ತು. ಮುಂದಿನ ವಿಚಾರಣೆ ನಾಳೆಗೆ ಮುಂದೂಡಿದ ಕೋರ್ಟ್ ಒಂದು ದಿನದ ನ್ಯಾಯಾಂಗ ಬಂಧನ ವಿಧಿಸಿದೆ.
ಇನ್ನೊಂದೆಡೆ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಸೊರೆನ್ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ಪಟ್ಟಿ ಮಾಡಲು ಸುಪ್ರೀಂ ಕೋರ್ಟ್ ಇಂದು ಸಮ್ಮತಿಸಿದೆ.