ಲಕ್ನೋ, ಫೆ 02 (DaijiworldNews/PC): ವಾರಾಣಸಿಯ ಜ್ಞಾನವಾಪಿಯಲ್ಲಿ ಹಿಂದೂಗಳ ಪೂಜೆ ಪ್ರಶ್ನಿಸಿ ಅಲಹಾಬಾದ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದ ಮಸೀದಿ ಸಮಿತಿಗೆ ಭಾರಿ ಹಿನ್ನಡೆಯಾಗಿದೆ. ಸದ್ಯಕ್ಕೆ ಹಿಂದೂಗಳ ಪೂಜೆಗೆ ತಡೆ ನೀಡಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ಜ್ಞಾನವಾಪಿ ಮಸೀದಿ ಸಮಿತಿ ಅಲಹಾಬಾದ್ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದು ಈಗ ಜಿಲ್ಲಾ ಕೋರ್ಟ್ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಫೆ.6 ರೊಳಗೆ ತನ್ನ ಮನವಿಗೆ ತಿದ್ದುಪಡಿಗಳನ್ನು ಮಾಡಲು ಮಸೀದಿ ಸಮಿತಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಹೈಕೋರ್ಟ್ ಉತ್ತರ ಪ್ರದೇಶದ ಸರ್ಕಾರಕ್ಕೆ ಸದ್ಯದ ಮಟ್ಟಿಗೆ ಸ್ಥಳವನ್ನು ಸಂರಕ್ಷಿಸುವಂತೆ ಸೂಚನೆ ನೀಡಿದೆ. ಯಾವುದೇ ಹಾನಿ ಅಥವಾ ನಿರ್ಮಾಣ ಚಟುವಟಿಕೆ ನಡೆಯದಂತೆ ನೋಡಿಕೊಳ್ಳುವಂತೆಯೂ ಸರ್ಕಾರಕ್ಕೆ ಕೋರ್ಟ್ ಸೂಚನೆ ನೀಡಿದೆ.