ಜೈಪುರ, ಫೆ 03 (DaijiworldNews/PC): ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ಗೆ ಕೋವಿಡ್-19 ಹಾಗೂ ಹಂದಿ ಜ್ವರ ಪಾಸಿಟಿವ್ ಕಾಣಿಸಿಕೊಂಡಿದೆ ಎಂದು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ ಕೆಲ ದಿನಗಳಿಂದ ಆರೋಗ್ಯದಲ್ಲಿ ಏರು ಪೇರು ಉಂಟಾಗಿದ್ದು ವೈದ್ಯರ ಸಲಹೆ ಮೇರೆಗೆ ನಾನು ಪರೀಕ್ಷೆಗೆ ಒಳಗಾಗಿದ್ದು ಕೋವಿಡ್-19 ಹಾಗೂ ಹಂದಿಜ್ವರ ಪಾಸಿಟಿವ್ ಎಂದು ದೃಢಪಟ್ಟಿದೆ.
ಆದ್ದರಿಂದ ಮುಂದಿನ ಏಳು ದಿನಗಳವರೆಗೆ ನಾನು ಯಾರನ್ನೂ ಭೇಟಿಯಾಗಲು ಸಾಧ್ಯವಾಗುವುದಿಲ್ಲ ಎಂದು ಬರೆದುಕೊಂಡಿದ್ದಾರೆ.
ಅಶೋಕ್ ಗೆಹ್ಲೋಟ್ ಅವರನ್ನು ಮುಂದಿನ ಚಿಕಿತ್ಸೆಗಾಗಿ ಜೈಪುರದ SMS ಆಸ್ಪತ್ರೆಯ ಐಡಿಎಚ್ ಕೇಂದ್ರಕ್ಕೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.