ನವದೆಹಲಿ, ಫೆ 03 (DaijiworldNews/HR): ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಸಂಘರ್ಷದ ನಡುವೆಯೇ ಭಾರತ ಸರ್ಕಾರವು ಮೇ 10 ರೊಳಗೆ ತನ್ನ ಎಲ್ಲಾ ಯೋಧರನ್ನು ಭಾರತಕ್ಕೆ ವಾಪಾಸ್ ಕರೆಸಿಕೊಳ್ಳಲು ಒಪ್ಪಿರುವುದಾಗಿ ಮಾಲ್ಡೀವ್ಸ್ ವಿದೇಶಾಂಗ ಸಚಿವಾಲಯ ತಿಳಿಸಿದೆ.
ನವದೆಹಲಿಯಲ್ಲಿ ಭಾರತ ಮತ್ತು ಮಾಲ್ಡೀವ್ಸ್ ನಡುವೆ ಉನ್ನತ ಮಟ್ಟದ ಕೋರ್ ಗ್ರೂಪ್ ಸಭೆಯಲ್ಲಿ ಈ ಒಪ್ಪಂದಕ್ಕೆ ಬರಲಾಗಿದ್ದು, ಮಾಲ್ಡೀವ್ಸ್ನಲ್ಲಿನ ಮೂರು ವಾಯುಯಾನ ವೇದಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ತನ್ನ ಮಿಲಿಟರಿ ಸಿಬ್ಬಂದಿಯನ್ನು ಮೇ 10 ರೊಳಗೆ ಭಾರತ ಬದಲಾಯಿಸಲಿದೆ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು ಭಾರತ ಸರ್ಕಾರವು ಮಾರ್ಚ್ 10 ರೊಳಗೆ ಮೂರು ವಾಯುಯಾನ ಪ್ಲಾಟ್ಫಾರ್ಮ್ಗಳಲ್ಲಿ ಒಂದರಲ್ಲಿ ಮಿಲಿಟರಿ ಸಿಬ್ಬಂದಿಯನ್ನು ಬದಲಾಯಿಸುತ್ತದೆ ಮತ್ತು ಮೇ 10 ರೊಳಗೆ ಇತರ ಎರಡು ಪ್ಲಾಟ್ಫಾರ್ಮ್ಗಳಲ್ಲಿ ಮಿಲಿಟರಿ ಸಿಬ್ಬಂದಿಯನ್ನು ಬದಲಾಯಿಸುತ್ತದೆ ಎಂದು ತಿಳಿಸಿದೆ.