ಬೆಂಗಳೂರು, ಫೆ 03 (DaijiworldNews/PC): ಲೋಕಸಭೆ ಚುನಾವಣೆಯಲ್ಲಿ ಕಾಂಗೆಸ್ ಪಕ್ಷ ಸೋತರೆ 5 ಗ್ಯಾರಂಟಿ ಯೋಜನೆಗಳು ರದ್ದಾಗಲಿವೆ ಎಂಬ ಮಾಗಡಿ ಶಾಸಕ ಎಚ್.ಸಿ. ಬಾಲಕೃಷ್ಣ ನೀಡಿರುವ ಹೇಳಿಕೆ ಜನಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಿದೆ. ಆದ್ದರಿಂದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ನಿಯೋಗವು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ಮಾಗಡಿ ಶಾಸಕ ಬಾಲಕೃಷ್ಣರ ಹೇಳಿಕೆಯು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಪ್ರಕರಣವಾಗಿದೆ ಆದ್ದರಿಂದ ಕಾಂಗ್ರೆಸ್ ಪಕ್ಷದ ಮಾನ್ಯತೆ ರದ್ದುಪಡಿಸುವಂತೆ ಜೆಡಿಎಸ್ ನಿಖೀಲ್ ಕುಮಾರಸ್ವಾಮಿ ನೇತೃತ್ವದ ನಿಯೋಗ ಚುನಾವಣ ಆಯೋಗಕ್ಕೆ ದೂರು ನೀಡಿದೆ.
ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷದ ಮಾನ್ಯತೆ ರದ್ದುಪಡಿಸುವಂತೆ ಆಯೋಗಕ್ಕೆ ದೂರು ನೀಡಿದೆ.