ಬೆಂಗಳೂರು, ಫೆ 6(DaijiworldNews/SK): ನಮ್ಮ ಮೆಟ್ರೋ ಹಳಿಗಳ ಮೇಲೆ ಪದೇ ಪದೇ ಅಪಘಾತಗಳು ಸಂಭವಿಸುತ್ತಿದೆ. ಇದನ್ನು ತಡೆಯಲು ಮುಂದಾದ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ನಗರದ ಮೆಜೆಸ್ಟಿಕ್ ನಿಲ್ದಾಣದ ಪ್ಲ್ಯಾಟ್ಫಾರ್ಮ್ ಬ್ಯಾರಿಕೇಡ್ ಅಳವಡಿಸಿದೆ ಎಂದು ತಿಳಿದು ಬಂದಿದೆ.
ಮೆಟ್ರೋ ಹಳಿಗಳ ಮೇಲೆ ಹಾರುವ ಪ್ರಯಾಣಿಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನವರಿ ಮೊದಲ ವಾರದಲ್ಲಿ ಎರಡು ಬಾರಿ ಮೆಟ್ರೋ ಪ್ರಯಾಣಿಕರು ಹಳಿ ಮೇಲೆ ಇಳಿದ ಘಟನೆ ನಡೆದಿತ್ತು. ಈ ಹಿಂದೆ ಕೂಡ ಇಂತಹ ಸಾಕಷ್ಟು ಪ್ರಕರಣಗಳು ನಡೆದಿದ್ದರಿಂದ ರೈಲು ಸಂಚಾರದಲ್ಲೂ ವ್ಯತ್ಯಯ ಉಂಟಾಗಿತ್ತು.
ಇಷ್ಟೆಲ್ಲಾ ಅವಘಾಡಗಳು ಸಂಭವಿಸಿದರು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿರಲಿಲ್ಲ. ಆದರೆ ಇದೀಗ ಎಚ್ಚೆತ್ತುಕೊಂಡ ಬಿಎಂಆರ್ಸಿಎಲ್ ಅತಿಹೆಚ್ಚು ಪ್ರಯಾಣಿಕರು ಬಂದು ಹೋಗುವ ಮೆಜೆಸ್ಟಿಕ್ ನಿಲ್ದಾಣದಲ್ಲಿ ಬ್ಯಾರಿಕೇಡ್ ಅಳವಡಿಸಿದೆ.