ಡೆಹ್ರಾಡೂನ್, ಫೆ 06 (DaijiworldNews/HR): ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.
ಇಂದು ಕಾಂಗ್ರೆಸ್ ಶಾಸಕರ ವಿರೋಧದ ನಡುವೆ ಬಿಜೆಪಿ ಶಾಸಕರ ವಂದೇ ಮಾತರಂ, ಜೈಶ್ರೀರಾಮ್ ಘೋಷಣೆ ನಡುವೆಯೇ ಸಿಎಂ ಪುಷ್ಕರ್ ಸಿಂಗ್ ಯುಸಿಸಿ ಮಸೂದೆಯನ್ನು ಮಂಡಿಸಿದರು.
ಇನ್ನು ಎಲ್ಲಾ ನಾಗರಿಕರಿಗೆ ಏಕರೂಪದ ಮದುವೆ, ವಿಚ್ಛೇದನ, ಭೂಮಿ, ಆಸ್ತಿ ಮತ್ತು ಉತ್ತರಾಧಿಕಾರ ಕಾನೂನುಗಳನ್ನು ಪ್ರಸ್ತಾಪಿಸುವ ಅಂಶ ಈ ಮಸೂದೆಯಲ್ಲಿದೆ.
ಏಕರೂಪದ ನಾಗರಿಕ ಸಂಹಿತೆ ರಚನೆ ಸಂಬಂಧ ಸರ್ಕಾರ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ರಂಜನಾ ಪ್ರಕಾಶ್ ನೇತೃತ್ವದ ಸಮಿತಿಯನ್ನು ರಚಿಸಿತ್ತು. ಈ ಸಮಿತಿ 4 ಸಂಪುಟ ಹೊಂದಿರುವ 749 ಪುಟಗಳಿರುವ ವರದಿ ಮತ್ತು ಹಲವು ಶಿಫಾರಸುಗಳನ್ನು ಸರ್ಕಾರಕ್ಕೆ ನೀಡಿತ್ತು.