ಬೆಂಗಳೂರು, ಫೆ 06 (DaijiworldNews/AA): "ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಆದ್ದರಿಂದ ನಾಳೆ ಅವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಪ್ರತಿಭಟನೆಗೆ ಬಿಜೆಪಿಯ ಕೌಂಟರ್ ಪ್ರತಿಭಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೆಹಲಿಯಲ್ಲಿ ನಾಳೆ ಹೋರಾಟ ಮಾಡುತ್ತಿದ್ದು, ನಮಗೆ ಬರಬೇಕಾದ ಹಕ್ಕನ್ನು ಕೇಳುತ್ತಿದ್ದೇವೆ. ಸಿಎಂ ಸಿದ್ದರಾಮಯ್ಯ ಪ್ರತಿಭಟನೆ ಕುರಿತಂತೆ ನಿನ್ನೆ ಸಂಪೂರ್ಣ ಮಾಹಿತಿ ನೀಡಿದ್ದಾರೆ. ಕೇಂದ್ರದಿಂದ ಎಷ್ಟು ಹಣ ಬರಬೇಕೆಂದು ತಿಳಿಸಿದ್ದಾರೆ. ನಮ್ಮ ಹಕ್ಕು ಪಡೆಯಲು ನಾಳೆ ಕೇಂದ್ರ ಸರ್ಕಾರದ ಗಮನ ಸೆಳೆಯುವ ಉದ್ದೇಶದಿಂದ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ರಾಜ್ಯಕ್ಕೆ ಇಲ್ಲಿಯವರೆಗೆ ಬರ ಪರಿಹಾರ ದೊರೆತಿಲ್ಲ. ಸಿಎಂ, ಕೃಷ್ಣ ಭೈರೇಗೌಡ ಹೋದರೂ ಪರಿಹಾರ ದೊರೆತಿಲ್ಲ. ಅಂತಿಮವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ ಎಂದು ಹೇಳಿದರು.