ನವದೆಹಲಿ, ಫೆ 07(DaijiworldNews/MS): ಕೇಂದ್ರ ಸರ್ಕಾರದ ವಿರುದ್ದ ದೆಹಲಿಯ ಜಂತರ್ ಮಂತರ್ನಲ್ಲಿ ಹಮ್ಮಿಕೊಂಡಿರುವ ‘ "ನನ್ನ ತೆರಿಗೆ ನನ್ನ ಹಕ್ಕು ಚಲೋ ದೆಹಲಿ" ಪ್ರತಿಭಟನೆಯಲ್ಲಿ ಭಾಗವಹಿಸಲು ಮುಖ್ಯ ಮಂತ್ರಿ ಸಿದ್ಥರಾಮಯ್ಯ , ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬುಧವಾರ ಬೆಳಿಗ್ಗೆ ರಾಷ್ಟ್ರ ರಾಜಧಾನಿಗೆ ತಲುಪಿದ್ದಾರೆ.
ಇಂದು ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದ್ದು, ಕನ್ನಡಿಗರ ನ್ಯಾಯಯುತ ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ಆಗುತ್ತಿರುವ ತಾರತಮ್ಯದ ವಿರುದ್ಧ ಧ್ವನಿಯೆತ್ತೋಣ ಬನ್ನಿ ಅಂತ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸರ್ಕಾರದ ಎಲ್ಲಾ ಸಚಿವರು, ಕಾಂಗ್ರೆಸ್ನ ಎಲ್ಲಾ ಶಾಸಕರು ಪ್ರತಿಭಟನೆ ಮಾಡಲಿದ್ದಾರೆ.
ಗುರುವಾರ ಇದೇ ಜಾಗದಲ್ಲಿ ಕೇರಳ ಸರ್ಕಾರ ಕೇಂದ್ರ ವಿರುದ್ಧ ಪ್ರತಿಭಟನೆ ಹಮ್ಮಿಕೊಂಡಿದ್ದು , ಕೇರಳ ಮುಖ್ಯ ಮಂತ್ರಿ ಪಿಣರಾಯಿ ವಿಜಯನ್ ಕೂಡ ಇಂದು
ದೆಹಲಿ ತಲುಪಿದ್ದಾರೆ.
ತೆರಿಗೆ ಪಾಲು ಹಂಚಿಕೆ, ಅನುದಾನ, ನೆರವು ನೀಡಿಕೆಯ ವಿಚಾರದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿರುವ
ಕರ್ನಾಟಕ ಮತ್ತು ಕೇರಳ ಸರ್ಕಾರ, ಈ ವಿಷಯವನ್ನು ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಲು ನಿರ್ಧರಿಸಿ ಪ್ರತಿಭಟನೆ ಆರಂಭಿಸಿವೆ. ಕೇರಳ ಸರ್ಕಾರದ ಪ್ರತಿಭಟನೆಗೆ ತಮಿಳುನಾಡು ಸರ್ಕಾರ ಕೂಡ ಬೆಂಬಲ ಸೂಚಿಸಿದೆ