ಬೆಳಗಾವಿ, ಫೆ 07 (DaijiworldNews/PC): ಕರ್ನಾಟಕ ಬಿಜೆಪಿ ಘಟಕವು ಕಾಂಗ್ರೆಸ್ ನ ‘ಚಲೋ ದೆಹಲಿ’ಕಾರ್ಯಕ್ರಮ ವಿರೋಧಿಸಿ ಫೆ.7 ರಂದು ಪ್ರತಿಭಟನೆ ನಡೆಸಿ ಬೆಳಗಾವಿಯ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದ್ದು ಈ ವೇಳೆ ಪೊಲೀಸರು 30 ಮಂದಿಯನ್ನು ವಶಕ್ಕೆ ಪಡೆದ್ದಾರೆ.
ಕಾಂಗ್ರೆಸ್ ಕಚೇರಿ ಎದುರು ಹಾಕಿದ್ದ ಬ್ಯಾರಿಕೇಡ್ಗಳನ್ನು ಪಕ್ಕಕ್ಕೆ ತಳ್ಳಿ ಬಿಜೆಪಿ ಧ್ವಜ ಹಿಡಿದುಕೊಂಡು ಒಳಗೆ ನುಗ್ಗಲು ಬಿಜೆಪಿ ಕಾರ್ಯಕರ್ತರು ಯತ್ನಿಸಿದರು. ಈ ವೇಳೆ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ ಕಚೇರಿಗೆ ನುಗ್ಗದಂತೆ ತಡೆದು 30 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.
ರಾಜ್ಯದ ಇತಿಹಾಸದಲ್ಲಿ ಇಷ್ಟು ದೊಡ್ಡ ನಾಟಕ ಮಾಡುವ ಸರ್ಕಾರ ಮತ್ತೊಂದಿಲ್ಲ. ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರು ತಮ್ಮ ತತ್ವ ಆದರ್ಶಗಳನ್ನು ಗಾಳಿಗೆ ತೂರಿ ಸ್ವಾರ್ಥ ಮತ್ತು ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಹೋರಾಟ ಮಾಡುತ್ತಿದ್ದಾರೆ. ಕಾವೇರಿ, ಮಹದಾಯಿ ವಿಚಾರದಲ್ಲಿ ಎಡವಟ್ಟು ಮಾಡಿದರೆ, ರೈತರಿಗೆ ಬರ ಪರಿಹಾರ ನೀಡಿಲ್ಲ. ಯಾವ ನೈತಿಕತೆ, ಯಾವ ಮುಖ ಇಟ್ಟುಕೊಂಡು ದೆಹಲಿಯಲ್ಲಿ ಧರಣಿ ಮಾಡುತ್ತಿದ್ದೀರಿ’ಎಂದು ಬಿ ವೈ ವಿಜಯೇಂದ್ರ ಪ್ರಶ್ನಿಸಿದರು.