ಮೈಸೂರು,ಫೆ 07 (DaijiworldNews/ AK): ನಾವು ಮನುಷ್ಯರು, ಮನುಷ್ಯ ಮನುಷ್ಯರ ನಡುವೆ ದ್ವೇಷ ಭಾವನೆ ಸರಿಯಲ್ಲ.ಕೆಲ ಪಟ್ಟಭದ್ರ ಹಿತಾಸಕ್ತಿಗಳು ಜಾತಿಯ ವಿಷ ಬೀಜ ಬಿತ್ತಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಸರ್ವಜನಾಂಗದ ಶಾಂತಿಯ ತೋಟದಂತೆ ಸಮಾಜ ಇರಬೇಕು ಎಂದು ಕುವೆಂಪು ಹೇಳಿದರು, ಅವರ ನುಡಿ ಸಾಕಾರ ಆಗಬೇಕಾದರೆ ಎಲ್ಲರೂ ಮನುಷ್ಯರಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಸುತ್ತೂರು ಜಾತ್ರಾ ಮಹೋತ್ಸವದ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಇಂದು ಇಡೀ ಸರ್ಕಾರ, ಎಲ್ಲಾ ಮಂತ್ರಿಗಳು, ಉಭಯ ಸದನಗಳ ಶಾಸಕರು, ಲೋಕಸಭೆ, ರಾಜ್ಯ ಸಭೆ ಸದಸ್ಯರು ಪ್ರತಿಭಟನೆ ಮಾಡಲು ದೆಹಲಿಗೆ ಹೋಗಿದ್ದೆವು. ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಸಲುವಾಗಿ ದೆಹಲಿಯಿಂದ ನೇರವಾಗಿ ಇಲ್ಲಿಗೆ ಬಂದಿದ್ದೇವೆ.
ಜಾತ್ರೆಗೆ ಬರುವುದಾಗಿ ಶ್ರೀ ಗಳಿಗೆ ಮಾತು ಕೊಟ್ಟಿದ್ದೆ.ಬೆಳಗ್ಗೆ ಉದ್ಘಾಟನೆಗೆ ಬರಲಾಗಲಿಲ್ಲ.ಮೊದಲೇ ಹೇಳಿದಂತೆ ಸಂಜೆ ಆರು ಗಂಟೆಗೆ ಸರಿಯಾಗಿ ಬಂದಿದ್ದೇನೆ. ಸುತ್ತೂರು ಜಾತ್ರೆಯಲ್ಲಿ ಪ್ರತಿವರ್ಷ ತಪ್ಪದೇ ಭಾಗಿಯಾಗುತ್ತಾ ಬಂದಿದ್ದೇನೆ.ಇಂದು ಕೂಡ ಆಗಮಿಸಿ ಅತ್ಯಂತ ಸಂತೋಷದಿಂದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದೇ ನೆ. ಬೇರೆಡೆಯೂ ಜಾತ್ರೆಗಳು ನಡೆಯುತ್ತವೆ.ಆದರೆ ಸುತ್ತೂರು ಜಾತ್ರಾ ಮಹೋತ್ಸವಕ್ಕೆ ವಿಶೇಷ ಮಹತ್ವವಿದೆ ಎಂದರು.