ನವದೆಹಲಿ, ಫೆ 08 (DaijiworldNews/HR): ಕೇಂದ್ರ ಸರ್ಕಾರದ ಶ್ವೇತ ಪತ್ರಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಕಪ್ಪು ಪತ್ರ ಬಿಡುಗಡೆ ಮಾಡಿದ್ದಾರೆ.
ಕಪ್ಪು ಪತ್ರಕ್ಕೆ ಹತ್ತು ವರ್ಷಗಳ ಅನ್ಯಾಯದ ಕಾಲ ಎಂದು ಹೆಸರಿಸಲಾಗಿದ್ದು, ಇದರಲ್ಲಿ ಹತ್ತು ವರ್ಷಗಳ ಮೋದಿ ಸರ್ಕಾರದ ಅವಧಿಯ ವೈಫಲ್ಯಗಳನ್ನು ಪಟ್ಟಿ ಮಾಡಲಾಗಿದೆ.
ಕಪ್ಪು ಪತ್ರ ಬಿಡುಗಡೆ ಮಾಡಿದ ನಂತರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, “ನಾವು ಸರ್ಕಾರದ ವಿರುದ್ಧ ‘ಕಪ್ಪು ಪತ್ರ’ ಬಿಡುಗಡೆ ಮಾಡುತ್ತಿದ್ದೇವೆ, ಏಕೆಂದರೆ ಅವರು ಸಂಸತ್ತಿನಲ್ಲಿ ಮಾತನಾಡುವಾಗ ಅವರು ಯಾವಾಗಲೂ ಸಾಧನೆಗಳ ಬಗ್ಗೆ ಮಾತನಾಡುತ್ತಾರೆ ಆದರೆ ತಮ್ಮ ವೈಫಲ್ಯಗಳ ಬಗ್ಗೆ ಎಂದಿಗೂ ಮಾತನಾಡುವುದಿಲ್ಲ. ಅವರು ಆರ್ಥಿಕತೆಯಲ್ಲಿ ವಿಫಲರಾಗಿದ್ದಾರೆ” ಎಂದಿದ್ದಾರೆ.