ಹಲ್ದವಾನಿ, ಫೆ 09 (DaijiworldNews/PC): ಉತ್ತರಾಖಂಡದ ಹಲ್ದವಾನಿ ನಗರದಲ್ಲಿ ಮದರಸಾ ಮತ್ತು ಮಸೀದಿಯನ್ನು ಅಕ್ರಮವಾಗಿ ಕಟ್ಟಲಾಗಿದ್ದು ಕೋರ್ಟ್ ಆದೇಶದಂತೆ ಅದನ್ನು ತೆರವುಗೊಳಿಸಿದ ಬೆನ್ನೆಲ್ಲೇ ಹಿಂಸಾಚಾರ ಭುಗಿಲೆದ್ದಿದೆ.
ಅಲ್ಲಿನ ಸ್ಥಳೀಯರು ಪೊಲೀಸ್ ಠಾಣೆ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದ್ದು ಘಟನೆಯಲ್ಲಿ 60 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದು ಸದ್ಯ ಹಲ್ದವಾನಿ ನಗರದಾದ್ಯಂತ ಫೆ. 8 ರಂದು ಕರ್ಫ್ಯೂ ಹೇರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ, ಹಾಗೂ ಸ್ಥಳೀಯ ಮದರಸಾವನ್ನು ನೆಲಸಮಗೊಳಿಸುವಲ್ಲಿ ಭಾಗಿಯಾಗಿರುವ ಪುರಸಭೆಯ ಕಾರ್ಮಿಕರು ಹೆಚ್ಚಿನ ಗಾಯಗೊಂಡಿದ್ದು ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆಯ ಕುರಿತು ಡೆಹರಾಡೂನ್ನಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಮುಖ್ಯ ಕಾರ್ಯದರ್ಶಿ ರಾಧಾ ರತುರಿ ಮತ್ತು ಡಿಜಿಪಿ ಅಭಿನವ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಆಡಳಿತದ ತಂಡವೊಂದು ನ್ಯಾಯಾಲಯದ ಆದೇಶಕ್ಕೆ ಅನುಸಾರವಾಗಿ ಅತಿಕ್ರಮಣ ಕಟ್ಟಡ ತೆರವುಗೊಳಿಸಲು ಬನ್ಭೂಲ್ಪುರ ಪ್ರದೇಶಕ್ಕೆ ಹೋಗಿತ್ತು. ಆದರೆ ಅಲ್ಲಿಯ ಜನ ಗಲಾಟೆ ನಡೆಸಿದ್ದು, ಹಿಂಸಾಚಾರ ಸ್ವರೂಪ ಪಡೆದಿದ್ದು ಸದ್ಯ ಸ್ಥಳದಲ್ಲಿ ಕರ್ಫ್ಯೂ ವಿಧಿಸಲಾಗಿದ್ದು ಹೆಚ್ಚುವರಿ ಪೊಲೀಸ್ ಮತ್ತು ಅರೆ ಸೇನಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ .