ಮೈಸೂರು, ಫೆ 11 (DaijiworldNews/HR): ಮೈಸೂರು ಜಿಲ್ಲೆಗೆ ಕೇಂದ್ರ ಗೃಹ ಸಚಿವು ಅಮಿತ್ ಶಾ ಆಗಮನ ಹಿನ್ನೆಲೆ ಮೈಸೂರು ಗ್ರಾಮಾಂತರ ಅಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್ ನೇತೃತ್ವದಲ್ಲಿ “ನನ್ನ ತೆರಿಗೆ ನನ್ನ ಹಕ್ಕು” ಘೋಷಣೆಯೊಂದಿಗೆ “ಬರದಿಂದ ನಲುಗುತ್ತಿರುವ ನಾಡಿಗೆ ಬರಿಗೈಯಲ್ಲಿ ಬಂದಿರಾ?” ಎಂಬ ಪ್ರಶ್ನೆಯೊಂದಿಗೆ ಪೋಸ್ಟರ್ ಅಭಿಯಾನವನ್ನು ಕಾರ್ಯಕರ್ತರು ಕೈಗೊಂಡಿದ್ದಾರೆ.
ಮೈಸೂರು ಜಿಲ್ಲೆಗೆ ಕೇಂದ್ರ ಗೃಹ ಸಚಿವು ಅಮಿತ್ ಶಾಆಗಮನ ಹಿನ್ನೆಲೆ ಮೈಸೂರು ಕಾಂಗ್ರೆಸ್ ಘಟಕದಿಂದ ಪ್ರತಿಭಟನೆಗೆ ಸಿದ್ಧತೆ ನಡೆಸಲಾಗಿದೆ.
ಇನ್ನು ಇಂದು ಬೆಳಗ್ಗೆ 11 ಗಂಟೆಗೆ ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಅಮಿತ್ ಶಾ ವಿರುದ್ಧ ಪೋಸ್ಟರ್ ಅಭಿಯಾನ ನಡೆಸಲು ಜಿಲ್ಲಾ ಕಾಂಗ್ರೆಸ್ ತಯಾರಿ ಮಾಡಿಕೊಂಡಿದೆ ಎನ್ನಲಾಗಿದೆ.