ಮಹಾರಾಷ್ಟ್ರ, ಫೆ 12 (DaijiworldNews/HR): ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಅವರು ಸೋಮವಾರ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ನಾನು 12/02/2024 ರಂದು ಮಧ್ಯಾಹ್ನದಿಂದ ಜಾರಿಗೆ ಬರುವಂತೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆಯನ್ನು ಸಲ್ಲಿಸುತ್ತೇನೆ ಎಂದು ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಮುಖ್ಯಸ್ಥ ನಾನಾ ಪಟೋಲೆ ಅವರಿಗೆ ಸಲ್ಲಿಸಿದ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಇನ್ನು ಮಹಾರಾಷ್ಟ್ರದ ಹಿರಿಯ ಕಾಂಗ್ರೆಸ್ ನಾಯಕರಾದ ಬಾಬಾ ಸಿದ್ದಿಕ್ ಮತ್ತು ಮಿಲಿಂದ್ ದಿಯೋರಾ ಅವರು ಕಾಂಗ್ರೆಸ್ ಪಕ್ಷವನ್ನು ತೊರೆದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.