ನವದೆಹಲಿ,ಫೆ 12 (DaijiworldNews/SK): ಇದೇ ಮೊದಲ ಬಾರಿಗೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಗಳಲ್ಲಿ ಕಾನ್ಸ್ಟೇಬಲ್ಗಳ ನೇಮಕಾತಿಗಾಗಿ ಪರೀಕ್ಷೆಯನ್ನು ಹಿಂದಿ ಮತ್ತು ಇಂಗ್ಲಿಷ್ ಸೇರಿ 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲಾಗುವುದು ಎಂದು ಕೇಂದ್ರ ಗೃಹ ಇಲಾಖೆ ಮಾಹಿತಿ ಹೊರಡಿಸಿದೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಕೇಂದ್ರ ಗೃಹ ಇಲಾಖೆಯು, ದೇಶಾದ್ಯಂತ 128 ನಗರಗಳಲ್ಲಿ ಸುಮಾರು 48 ಲಕ್ಷ ಅಭ್ಯರ್ಥಿಗಳಿಗೆ ಫೆ 20ರಿಂದ ಮಾ 7 ರ ವರೆಗೆ CAPF ಪರೀಕ್ಷೆ ನಡೆಸಲಾಗುತ್ತದೆ.
ಇನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಮತ್ತು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಮಾರ್ಗದರ್ಶನದಲ್ಲಿ ಗೃಹ ವ್ಯವಹಾರಗಳ ಸಚಿವಾಲಯವು 13 ಪ್ರಾದೇಶಿಕ ಭಾಷೆಗಳಲ್ಲಿ ಸಿಎಪಿಎಫ್ ಗಳ ನೇಮಕಾತಿಗಾಗಿ ಕಾನ್ಸ್ಟೇಬಲ್ ಪರೀಕ್ಷೆ ನಡೆಸಲು ನಿರ್ಧರಿಸಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆ ಹೆಚ್ಚಿಸಲು ಮತ್ತು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸಲು ಕೇಂದ್ರ ಗೃಹ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.