ಪಟ್ನಾ, ಫೆ13(DaijiworldNews/SK): ಎಐಎಂಐಎಂ ರಾಜ್ಯ ಕಾರ್ಯದರ್ಶಿ ಅಬ್ದುಲ್ ಸಲಾಂ ಅವರನ್ನು ದುಷ್ಕರ್ಮಿಗಳು ಬಿಹಾರದ ಗೋಪಾಲ್ಗಂಜ್ನಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೈಕ್ ಗಳಲ್ಲಿ ಬಂದ ದುಷ್ಕರ್ಮಿಗಳು ಅಬ್ದುಲ್ ಸಲಾಂ ಅವರಿಗೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಇನ್ನು ಆರೋಪಿಗಳನ್ನು ಪತ್ತೆ ಹಚ್ಚಲು ಎಸ್ಐಟಿ ರಚಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿದೆ’ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಾಂಜಲ್ ಕುಮಾರ್ ತಿಳಿಸಿದ್ದಾರೆ.
ಈ ಕುರಿತು ಪ್ರತಿಕಿಯಿಸಿದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು, ಗೋಪಾಲ್ಗಂಜ್ನಲ್ಲಿ ಎಐಎಂಐಎಂ ರಾಜ್ಯ ಕಾರ್ಯದರ್ಶಿ ಅಬ್ದುಲ್ ಸಲಾಂ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅವರ ಕುಟುಂಬಸ್ಥರಿಗೆ ದುಃಖ ಸಹಿಸಿಕೊಳ್ಳಲು ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಂತಾಪ ಸೂಚಿಸಿದ್ದಾರೆ.
ಇನ್ನು ಕಳೆದ ವರ್ಷ ಡಿಸೆಂಬರ್ನಲ್ಲಿ ಸಿವಾನ್ ಜಿಲ್ಲಾಧ್ಯಕ್ಷ ಆರಿಫ್ ಜಮಾಲ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಇದೀಗ ಎಐಎಂಐಎಂ ರಾಜ್ಯ ಕಾರ್ಯದರ್ಶಿ ಅಬ್ದುಲ್ ಸಲಾಂ ಹತ್ಯೆ ಮಾಡಲಾಗಿದೆ. ನಮ್ಮ ಪಕ್ಷದ ನಾಯಕರೇ ಏಕೆ ಗುರಿಯಾಗುತ್ತಿದ್ದಾರೆ? ಅವರ ಕುಟುಂಬಗಳಿಗೆ ನ್ಯಾಯ ಸಿಗುವುದು ಯಾವಾಗ? ಈ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಉತ್ತರಿಸಲಿ’ ಎಂದು ಕಿಡಿಕಾರಿದ್ದಾರೆ.