ನವದೆಹಲಿ,ಫೆ (DaijiworldNews/SK): ಬವಾನಾ ಕ್ರೀಡಾಂಗಣವನ್ನು ಜೈಲಾಗಿ ಪರಿವರ್ತಿಸುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಯನ್ನು ದೆಹಲಿ ಸರ್ಕಾರ ತಿರಸ್ಕರಿಸಿದೆ ಎಂದು ವರದಿಯಾಗಿದೆ.
ಕೇಂದ್ರದ ಪ್ರಸ್ತಾಪದ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಗೃಹ ಸಚಿವ ಕೈಲಾಶ್ ಗೆಹಲೋತ್ ಅವರು, ಕನಿಷ್ಠ ಬೆಂಬಲ ಬೆಲೆ (ಎಂಎಸ್ಪಿ) ಕಾನೂನು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘಟನೆಗಳು ‘ದೆಹಲಿ ಚಲೋ’ವನ್ನು ಹಮ್ಮಿಕೊಂಡಿದೆ. ‘ರೈತರ ಬೇಡಿಕೆಗಳು ಸತ್ಯದಿಂದ ಕೂಡಿದೆ. ಆದ್ದರಿಂದ ಇದನ್ನು ಗಮನದಲ್ಲಿಟ್ಟುಕೊಂಡು ಕ್ರೀಡಾಂಗಣವನ್ನು ಜೈಲಾಗಿ ಪರಿವರ್ತಿಸುವಂತೆ ಕೇಂದ್ರ ಸರ್ಕಾರ ಸಲ್ಲಿಸಿದ ಪ್ರಸ್ತಾವನೆಯನ್ನು ತಿರಸ್ಕರಿಸಲಾಗಿದೆ ಎಂದಿದ್ದಾರೆ.
ಇನ್ನು ಶಾಂತಿಯುತವಾಗಿ ಪ್ರತಿಭಟನೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಸಾಂವಿಧಾನಿಕ ಹಕ್ಕಾಗಿದೆ. ಆದ್ದರಿಂದ ರೈತರನ್ನು ಬಂಧಿಸುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.