ಬೆಂಗಳೂರು, ಫೆ 13 (DaijiworldNews/HR): ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧಿಸಿದಂತೆ ಲೋಕಾಯುಕ್ತ ಎಫ್ಐಆರ್ ದಾಖಲಿಸಿಕೊಂಡಿದ್ದು, ಮರು ತನಿಖೆ ಆರಂಭಿಸಿದೆ.
ಸಿಬಿಐಯಲ್ಲಿದ್ದ ಪ್ರಕರಣವನ್ನು ಮರು ತನಿಖೆಗೆ ಲೋಕಾಯುಕ್ತ ಎಫ್ಐಆರ್ ದಾಖಲಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಪತ್ರ ಬರೆದಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಪತ್ರ ಬರೆದಿದ್ದರೂ, ಸಿಬಿಐ ಈವರೆಗೂ ಲೋಕಾಯುಕ್ತಕ್ಕೆ ಸಂಬಂಧಿಸಿದ ದಾಖಲೆ ಒದಗಿಸಿಲ್ಲ ಎನ್ನಲಾಗಿದೆ.