ಮುಂಬೈ, ಫೆ 13 (DaijiworldNews/AK): ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂಬೈ ಬಿಜೆಪಿ ಕಚೇರಿಯಲ್ಲಿ ಅವರು ಪಕ್ಷಕ್ಕೆ ಸೇರಿದ್ದು, ಅವರೊಂದಿಗೆ ಮಾಜಿ ಕಾಂಗ್ರೆಸ್ ಎಂಎಲ್ಸಿ ಅಮರ್ ರಾಜುರ್ಕರ್ ಕೂಡಾ ಬಿಜೆಪಿಗೆ ಸೇರಿದ್ದಾರೆ.
ಸೋಮವಾರ ಚವಾಣ್ ತಮ್ಮ ಶಾಸಕ ಸ್ಥಾನ ಹಾಗೂ ಕಾಂಗ್ರೆಸ್ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದರು. ಎರಡು ದಿನಗಳಲ್ಲಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಅವರು ತಿಳಿಸಿದ್ದರು. ಇದೀಗ ಕಾಂಗ್ರೆಸ್ ತೊರೆದ ಒಂದೇ ದಿನದಲ್ಲಿ ಬಿಜೆಪಿಗೆ ಅವರು ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ತೊರೆದ ಬಳಿಕ ಅವರು, ನಾನು ಪಕ್ಷವನ್ನು ತೊರೆದಿದ್ದೇನೆ, ಶಾಸಕ ಸ್ಥಾನ ಮತ್ತು ಇತರ ಎಲ್ಲಾ ಪಕ್ಷದ ಹುದ್ದೆಗಳಿಂದ ಹೊರ ಬಂದಿದ್ದೇನೆ. ನಾನು ಪಕ್ಷದೊಂದಿಗಿನ ನನ್ನ ಎಲ್ಲಾ ಸಂಬಂಧವನ್ನು ಕಡಿದುಕೊಂಡಿದ್ದೇನೆ. ನಾನು ಪಕ್ಷಕ್ಕೆ ಪ್ರಮಾಣಿಕವಾಗಿ ದುಡಿದಿದ್ದೇನೆ ಎಂದರು.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಚವಾಣ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು