ಹುಬ್ಬಳ್ಳಿ, ಫೆ 14 (DaijiworldNews/HR): ಪ್ರತಿಭಟನೆಯಲ್ಲಿ ಕಲ್ಲು ಹೊಡೆಯುತ್ತಿರುವವರು ರೈತರಲ್ಲ. ಅನುಮತಿ ಪಡೆಯದೆ ಬರುವವರನ್ನು ತಡೆಯಲಾಗುತ್ತಿದೆ. ರೈತರು ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆಗೆ ಬರಬೇಕು. ಅವರೊಂದಿಗೆ ನಾವು ಸಹಾನುಭೂತಿಯಿಂದ ನಡೆದುಕೊಳ್ಳುತ್ತಿದ್ದೇವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿಧ ಬೇಡಿಕೆ ಈಡೇರಿಸಲು ರೈತರು ದೆಹಲಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ಹತ್ತಿಕ್ಕುವ ಕೆಲಸ ಬಿಜೆಪಿ ಮಾಡುತ್ತಿಲ್ಲ. ಈಗಾಗಲೇ ಕೃಷಿ ಸಚಿವ ಮುಂಡಾ ಅವರು ರೈತರ ಸಂಘಟನೆ ಜೊತೆ ಮಾತನಾಡಿದ್ದಾರೆ. ರೈತರು ಹೊಸ ಬೇಡಿಕೆ ಇಟ್ಟಿದ್ದು, ನಮ್ಮ ಸರ್ಕಾರ ಸಹಾನಭೂತಿಯಿಂದ ಆ ಬಗ್ಗೆ ಪರಿಶೀಲಿಸುತ್ತಿದೆ ಎಂದರು.
ಇನ್ನು ಪ್ರತಿಭಟನೆಯಲ್ಲಿ ಕಲ್ಲು ಹೊಡೆಯುತ್ತಿರುವವರು ರೈತರಲ್ಲ. ಅನುಮತಿ ಪಡೆಯದೆ ಬರುವವರನ್ನು ತಡೆಯಲಾಗುತ್ತಿದೆ. ರೈತರು ತಮ್ಮ ಬೇಡಿಕೆಗಳ ಬಗ್ಗೆ ಚರ್ಚೆಗೆ ಬರಬೇಕು. ಅವರೊಂದಿಗೆ ನಾವು ಸಹಾನುಭೂತಿಯಿಂದ ನಡೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದಾರೆ.