ನವದೆಹಲಿ, ಫೆ 15 (DaijiworldNews/HR): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಿದ ಹಿನ್ನಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಅವರ ಆತ್ಮಹತ್ಯೆಯ ಹಿನ್ನಲೆಯಲ್ಲಿ ಅಂದಿನ ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಫೆಬ್ರವರಿ 2022ರಲ್ಲಿ ಪ್ರತಿಭಟನೆ ನಡೆಸಲಾಗಿತ್ತು.
ಇನ್ನು ಈ ಪ್ರತಿಭಟನೆ ವೇಳೆ ಮುಂಜಾಗ್ರತಾ ಕ್ರಮವಾಗಿ ಅವರನ್ನು ಬಂಧಿಸಿ ಕ್ರಿಮಿನಲ್ ಪ್ರಕರಣವನ್ನು ದಾಖಲಾಗಿಸಲಾಗಿತ್ತು.
ಕಳೆದ ವಾರ ಈ ಪ್ರಕರಣದ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ವಿಚಾರಣಾ ನ್ಯಾಯಾಲಯದ ವಿಚಾರಣೆಯನ್ನು ರದ್ದುಗೊಳಿಸಲು ನಿರಾಕರಿಸಿತು ಮತ್ತು ಫೆಬ್ರವರಿ 26 ರಂದು ವಿಚಾರಣಾ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆಯೂ ಸೂಚಿಸಿತ್ತು. ಈ ಹಿನ್ನಲೆಯಲ್ಲಿ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.