ಹುಬ್ಬಳ್ಳಿ, ಫೆ 15 (DaijiworldNews/HR): ಮಹದಾಯಿ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಕೇಂದ್ರ ಸರ್ಕಾರ ಇದಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮಹದಾಯಿ ಯೋಜನೆ ಕಾಮಗಾರಿಗೆ ಪರವಾನಿಗೆ ಸಿಕ್ಕಿದೆ ಎಂದು ಬಿಜೆಪಿಯವರು ಸಿಹಿಹಂಚಿ ವಿಜಯೋತ್ಸವ ಆಚರಿಸಿದ್ದರು. ಆದರೆ ಈಗ ಕೇಂದ್ರ ಸಚಿವ ಭೂಪೇಂದ್ರ ಯಾದವ್ ಇದಕ್ಕೆ ಸಂಬಂಧಿಸಿದ ಅರ್ಜಿ ತಿರಸ್ಕರಿಸಿದ್ದಾರೆ ಎಂದರು.
ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ಮಂಡಿಸಲಾಗುವ ಬಜೆಟ್ ಹೊಸ ದಿಕ್ಸೂಚಿ ಆಗಲಿದೆ ಮತ್ತು ಆಶಾದಾಯಕವಾಗಿರಲಿದೆ ಎಂದು ತಿಳಿಸಿದ್ದಾರೆ.