ಬೆಂಗಳೂರು, ಫೆ 16 (DaijiworldNews/HR): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಯಲ್ಲಿ 15ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ.
2023-24ನೇ ಸಾಲಿಗೆ 3.37 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಿದ್ದ ಸಿದ್ದರಾಮಯ್ಯ ಅವರು 2024-25ನೇ ಸಾಲಿಗೆ 3.80 ಲಕ್ಷ ಕೋಟಿ ರೂ. ದಾಖಲೆ ಮೊತ್ತದ ಬಜೆಟ್ ಮಂಡಿಸುತ್ತಿದ್ದಾರೆ.
ಇನ್ನು ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರಿಂದ ಬಜೆಟ್ ಮೇಲಿನ ನಿರೀಕ್ಷೆ, ಕುತೂಹಲಗಳೂ ಹೆಚ್ಚಾಗಿದೆ.