ಬೆಂಗಳೂರು,ಫೆ 16 (DaijiworldNews/AK): ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಅವರು ಇಂದು 2024-25 ನೇ ಸಾಲಿನ ಆಯವ್ಯಯವನ್ನು ಮಂಡಿಸಿದ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಬಸವಣ್ಣನವರು ಸಮಾನತೆಯನ್ನು ಕಂಡಿದ್ದವರು. ಸಮಸಮಾಜಕ್ಕಾಗಿ ಚಳವಳಿ ಮಾಡಿದವರನ್ನು ಸಾಂಸ್ಕಂತಿಕ ನಾಯಕ ಎಂದು ಘೋಷಿಸಿದ್ದೇವೆ.
ಕೇಂದ್ರ ಸರ್ಕಾರದ ಬಿಜೆಪಿಯ ಅವಧಿಯದ್ದು ಶೇ 5.8% ಸರ್ಕಾರ. ನಮ್ಮದು ಶೇ 2.95 % ವಿತ್ತೀಯ ಕೊರತೆ (ಫಿಸ್ಕಲ್ ಡೆಫಿಸಿಟ್) ಇದೆ. ಒಟ್ಟಾರೆ ಜನಪರ ಬಜೆಟ್. ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸಮಾನವಾಗಿ ಬೆಳೆಸುವ ಕೆಲಸ ಮಾಡಲಾಗಿದೆ ಎಂದರು.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸುತ್ತಾ 1,20000 ಕೋಟಿ ಅಭಿವೃದ್ಧಿಗೆ ಖರ್ಚು ಮಾಡಿದರೆ ಅದು ಅಭಿವೃದ್ಧಿಪೂರಕ ಬಜೆಟ್. 52009 ಕೋಟಿ ಬಡವರಿಗೆ ಖರ್ಚು ಮಾಡಿದೆ ಅದು ಅಭಿವೃದ್ಧಿಗೆ ಪೂರಕವಾಗಿರುವಂಥದ್ದು ಎಂದರು.