ನವದೆಹಲಿ, ಫೆ 17(DaijiworldNews/SK): ಈ ಬಾರಿಯ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವು ತಿಂಗಳು ಮಾತ್ರ ಬಾಕಿಯಿದ್ದು, ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೆಹಲಿಯಲ್ಲಿ ಇಂದಿನಿಂದ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಪ್ರಾರಂಭವಾಗಿದೆ ಎಂದು ವರದಿಯಾಗಿದೆ.
ಮೂಲಗಳ ಪ್ರಕಾರ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆಯುವ ನಿಟ್ಟಿನಲ್ಲಿ ಪಕ್ಷದ ನಾಯಕರು ಕಾರ್ಯತಂತ್ರಗಳನ್ನು ಸಿದ್ದಪಡಿಸಿದ್ದಾರೆ ಎಂದು ತಿಳಿದು ಬಂದಿದೆ.
ಇನ್ನು ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಸೇರಿದಂತೆ ಕೇಂದ್ರ ಸಚಿವರು, ಹಾಗೂ ವಿವಿಧ ರಾಜ್ಯಗಳ ಬಿಜೆಪಿ ಪಕ್ಷದ ನಾಯಕರು ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.