ಬೆಂಗಳೂರು,ಫೆ 18 (DaijiworldNews/ AK): ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಸೀಜ್ ಮಾಡಿರೋದು ರಾಜಕೀಯ ಉದ್ದೇಶದಿಂದ ಎಂದು ಗೃಹ ಸಚಿವ ಪರಮೇಶ್ವರ್ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷಕ್ಕೆ ಹೇಗಾದರೂ ಮಾಡಿ ತೊಂದರೆ ಕೊಡಬೇಕು ಎಂದು ನಿರ್ಧಾರ ಮಾಡಿದೆ ಎಂದು ಆರೋಪಿಸಿದರು.
ಸುಪ್ರೀಂ ಕೋರ್ಟ್ ಚುನಾವಣೆ ಬಾಂಡ್ ತೆಗೆದುಕೊಳ್ಳಬಾರದು ಅಂತ ಆದೇಶ ಮಾಡಿದೆ. ಇಲ್ಲಿವರೆಗೂ ತೆಗೆದುಕೊಂಡಿರೋ ಬಾಂಡ್ಗಳ ಬಗ್ಗೆ ಮಾಹಿತಿ ಕೊಡುವಂತೆ ಕೋರ್ಟ್ ಕೇಳಿದೆ. ಈ ಹಿನ್ನೆಲೆಯಲ್ಲಿ ಅವರು ಸೀಜ್ ಮಾಡಿದ್ದಾರೆ ಅನ್ನಿಸುತ್ತೆ ಎಂದು ವಾಗ್ದಾಳಿ ನಡೆಸಿದ್ದಾರೆ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಖಾತೆಗಳನ್ನ ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ. ಅಕೌಂಟ್ ವಿವರ ಕೇಳಬಹುದಿತ್ತು. ಸೀಜ್ ಮಾಡೋ ಅವಶ್ಯಕತೆ ಇರಲಿಲ್ಲ ಎಂದು ಹೇಳಿದರು.
ಬಳಿಕ ಐಟಿಗೆ ಅರಿವಾದ ಮೇಲೆ ಅಕೌಂಟ್ ಓಪನ್ ಮಾಡಿದ್ದಾರೆ. ಇದೆಲ್ಲವನ್ನು ನೋಡಿದ್ರೆ ಉದ್ದೇಶ ಪೂರ್ವಕವಾಗಿ ಕೇಂದ್ರ ಮಾಡುತ್ತಿದೆ. ಬರೀ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಹೀಗೆ ಆದರೆ ಇದು ಉದ್ದೇಶಪೂರ್ವಕವಾಗಿ ಆಗಿದೆ ಅಂತ ಅನ್ನಿಸುತ್ತದೆ. ಇದರಲ್ಲಿ ರಾಜಕೀಯ ಇದೆ ಅಂತ ಅನ್ನಿಸುತ್ತೆ ಅಂತ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.