ಫೆ 19 (DaijiworldNews/HR): ಬಹುಜನ ಸಮಾಜ ಪಕ್ಷವು (ಬಿಎಸ್ಪಿ) ಲೋಕಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಬಿಎಸ್ಪಿಯು ಸ್ವತಂತ್ರವಾಗಿ ಸ್ಪರ್ಧಿಸಲಿದೆ. ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬಿಎಸ್ಪಿಯನ್ನು ಇಂಡಿಯಾ ಒಕ್ಕೂಟವನ್ನು ಸೇರಿಸಿಕೊಳ್ಳಲು ಹಲವು ನಾಯಕರು ಪ್ರಯತ್ನ ನಡೆಸುತ್ತಿದ್ದರು. ಬಿಎಸ್ಪಿ ಯಾವುದೇ ಪಕ್ಷದೊಂದಿಗೆ ಯಾವುದೇ ಒಕ್ಕೂಟವನ್ನು ರಚಿಸುವುದಿಲ್ಲ ಮತ್ತು ಇದನ್ನು ಹಲವು ಬಾರಿ ಹೇಳಲಾಗಿದೆ ಎಂದರು.
ಇನ್ನು ಸಮಾಜದ ಎಲ್ಲಾ ವರ್ಗಗಳ, ವಿಶೇಷವಾಗಿ ಬಡವರು, ತುಳಿತಕ್ಕೊಳಗಾದ ಮತ್ತು ನಿರ್ಲಕ್ಷಿತರ ಯೋಗಕ್ಷೇಮ ಮತ್ತು ಕಲ್ಯಾಣವನ್ನು ಪರಿಗಣಿಸಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕೇವಲ ಸ್ವಂತ ಬಲವನ್ನು ಅವಲಂಬಿಸಿ ಸ್ವತಂತ್ರವಾಗಿ ಸ್ಪರ್ಧಿಸುವ ಬಿಎಸ್ಪಿಯ ನಿರ್ಧಾರವು ಅಚಲವಾಗಿದೆ ಎಂದಿದ್ದಾರೆ.