ಬೆಂಗಳೂರು, ಫೆ 19 (DaijiworldNews/MS): ವಸತಿ ಶಾಲೆಗಳಲ್ಲಿ"ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬಾ" ಘೋಷ ವಾಕ್ಯ ಬದಲಾವಣೆ ವಿಚಾರವಾಗಿ ವಿಧಾನಸಭೆಯಲ್ಲಿ ಪ್ರತಿದ್ವನಿಸಿತು.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಮುರಾರ್ಜಿ ವಸತಿ ಶಾಲೆಯಲ್ಲಿ ಕುವೆಂಪುರವರ ಬರಹ ಬದಲಾವಣೆ ವಿಷಯವನ್ನು, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಈ ವಿಷಯವನ್ನು ಪ್ರಸ್ತಾಪಿಸಿ ಕುವೆಂಪು ಅವರಿಗೆ ಅಪಮಾನ ಮಾಡುವ ರೀತಿಯಲ್ಲಿ ಘೋಷವಾಕ್ಯವನ್ನು ಬದಲಾಯಿಸಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ವೇಳೆ ಆಡಳಿತ ಹಾಗೂ ವಿಪಕ್ಷಗಳ ನಡುವೆ ಬಾರಿ ಗಲಾಟೆ ಗದ್ದಲ ಜರುಗಿದ ಪ್ರಸಂಗ ನಡೆಯಿತು. ಈ ಬಗ್ಗೆ ನಾಳೆ ಸರ್ಕಾರ ಇದಕ್ಕೆ ಉತ್ತರ ಕೊಡುತ್ತೆ ಎಂದು ಸ್ಪೀಕರ್ ಯುಟಿ ಖಾದರ್ ತಿಳಿಸಿದರು.
ಈ ಸಂದರ್ಭದಲ್ಲಿ ಬಿಜೆಪಿಯ ಮಾಜಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್,ಕುವೆಂಪುಗೆ ಅವಮಾನಿಸುವ ರೀತಿಯಲ್ಲಿ ಬರಹವನ್ನು ಬದಲಾಯಿಸಿದ್ದಾರೆ. ಇದಕ್ಕೆ ಸಚಿವ ಕೃಷ್ಣ ಬೈರೇಗೌಡ ಕುವೆಂಪು ಅವರ ಪಾಠವನ್ನೇ ತೆಗೆದವರು ಪರಸ್ಪರ ಆರೋಪ- ಪ್ರತ್ಯಾರೋಪ ಮಾಡಿದರು.