ಬೆಂಗಳೂರು, ಫೆ 19 (DaijiworldNews/HR): ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಕವಿತೆಯ ಘೋಷವಾಕ್ಯ ಬದಲಾವಣೆಗೆ ಕಾರಣ ಏನೆಂಬುದು ಗೊತ್ತಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಘೋಷವಾಕ್ಯ ಬದಲಾವಣೆ ಮಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಯಾವ ನಿಟ್ಟಿನಲ್ಲಿ ಈ ರೀತಿಯಾಗಿ ಘೋಷ ವಾಕ್ಯ ಬದಲಾವಣೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಯಾಕೆಂದರೆ ಅದು ಕುವೆಂಪು ಅವರ ಕವಿತೆಯ ಸಾಲುಗಳು. ನಾವು ಕುವೆಂಪು ಆಶಯದ ರೀತಿಯಲ್ಲೇ ನಡೆದುಕೊಂಡು ಹೋಗುತ್ತೇವೆ ಎಂದರು.
ಇನ್ನು ವಿದ್ಯೆ ಅಂದರೆ ಸರಸ್ವತಿ. ಕೈ ಮುಗಿಯುವುದು ನಮ್ಮ ಸಂಪ್ರದಾಯ. ಅದು ಭಿಕ್ಷೆ ಬೇಡುವುದು ಅಲ್ಲ ಅಂತ ನನ್ನ ಅಭಿಪ್ರಾಯ. ಏನಾದರೂ ಉದಾಹರಣೆಗಾಗಿ ಆ ರೀತಿ ಮಾಡಿರಬಹುದು ಎಂದಿದ್ದಾರೆ.
ಮಕ್ಕಳ ಹಕ್ಕು ಚ್ಯುತಿಯಾಗಿ ಈ ರೀತಿ ಮಾಡಿದ್ದಾರೋ ಗೊತ್ತಿಲ್ಲ. ಕೈ ಮುಗಿದು ಒಳಗೆ ಬಂದು ನಿಮ್ಮ ಹಕ್ಕುನ್ನು ಪ್ರತಿಪಾದಿಸಿ ಅಂತ ಇದ್ದರೆ ಚನ್ನಾಗಿ ಇರುತ್ತಿತ್ತು ಎಂದು ಹೇಳಿದ್ದಾರೆ.