ಬೆಂಗಳೂರು,,ಫೆ 19 (DaijiworldNews/ AK): ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಅಂಕ ವ್ಯವಸ್ಥೆ, ಗ್ರೇಡ್ ವ್ಯವಸ್ಥೆ ಜಾರಿಗೆ ತರಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ್ ತಿಳಿಸಿದ್ದಾರೆ.
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಅಂಕಗಳು ನೀಡುವ ವ್ಯವಸ್ಥೆ ಒಂದೊಂದು ವಿವಿಗೆ ಒಂದೊಂದು ವ್ಯವಸ್ಥೆ ಇದೆ. ವಿವಿಗಳಲ್ಲಿ ಮೌಲ್ಯಮಾಪನ ವ್ಯವಸ್ಥೆ ಭಿನ್ನವಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಅನ್ಯಾಯ ಆಗ್ತಿದೆ. ಹೀಗಾಗಿ ಏಕರೂಪದ ಮೌಲ್ಯಮಾಪನ ವ್ಯವಸ್ಥೆ ಜಾರಿ ಮಾಡಬೇಕು. ಫೇಕ್ ಡಾಕ್ಟರೇಟ್ ಕೊಡುವ ವಿವಿಗಳು ಜಾಸ್ತಿ ಆಗಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ನ ಮಂಜುನಾಥ್ ಭಂಡಾರಿ ಪ್ರಶ್ನೆ ಕೇಳಿದರು.
ವಿದ್ಯಾರ್ಥಿಗಳು ಪದವಿ ಪಡೆದ ಮೇಲೆ ಪದವಿಯನ್ನ ರಿಜಿಸ್ಟರ್ ಮಾಡಿಸುವ ವ್ಯವಸ್ಥೆ ಜಾರಿ ಮಾಡಬೇಕು. ನಮ್ಮ ಸರ್ಕಾರಿ ವಿವಿಗಳಲ್ಲಿ ಅಂಕಗಳು ನೀಡುವ ವ್ಯವಸ್ಥೆ ಬದಲಾಗಿ ಗ್ರೇಡ್ ವ್ಯವಸ್ಥೆ ವಿವಿಗಳಲ್ಲಿ ಜಾರಿ ಮಾಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವ ಸುಧಾಕರ್, ರಾಜ್ಯದಲ್ಲಿ 30 ಖಾಸಗಿ ವಿವಿಗಳು ಇವೆ. ಖಾಸಗಿ ವಿವಿಗಳಲ್ಲಿ ಗ್ರೇಡಿಂಗ್ ಸಿಸ್ಟಮ್, ಅಂಕ ವ್ಯವಸ್ಥೆ ಬೇರೆ ಬೇರೆ ಇದೆ. ಸರ್ಕಾರ ವಿವಿಗಳ ವ್ಯವಸ್ಥೆ ಬೇರೆ ಇದೆ. ಇದರಿಂದ ಸಮಸ್ಯೆ ಆಗ್ತಿದೆ. ಇತ್ತೀಚೆಗೆ ಒಬ್ಬ ವಿದ್ಯಾರ್ಥಿ ಸಹ ಅಂಕ ಕಡಿಮೆ ಬಂತು ಎಂದು ಆತ್ಮಹತ್ಯೆ ಮಾಡಿಕೊಂಡ. ಇದರಿಂದಾಗಿ ಅಂಕ ಮಾದರಿ ಅಧ್ಯಯನಕ್ಕೆ ಒಂದು ಸಮಿತಿ ಮಾಡಲಾಯಿತು. ಸಮಿತಿ ಎಲ್ಲಾ ವಿವಿಗಳಲ್ಲಿ ಅಂಕ ಮಾದರಿ, ಗ್ರೇಡ್ ಮಾದರಿ ಏಕರೂಪವಾಗಿ ಮಾಡಬೇಕು ಅಂತ ವರದಿ ಕೊಟ್ಟಿದೆ.
ಕರ್ನಾಟಕ ಉನ್ನತ ಶಿಕ್ಷಣ ಪರಿಷತ್ನಲ್ಲಿ ಇದನ್ನು ಇಟ್ಟು ನಿರ್ಧಾರ ಮಾಡ್ತೀವಿ. ಖಾಸಗಿ, ಸರ್ಕಾರ ವಿವಿಗಳಿಗೆ ಏಕರೂಪದ ಅಂಕ, ಗ್ರೇಡ್ ವ್ಯವಸ್ಥೆ ಜಾರಿ ಮಾಡುವುದಾಗಿ
ಹೇಳಿದರು.