ಶ್ರೀನಗರ, ಫೆ 20 (DaijiworldNews/HR): ಜಮ್ಮು ಮತ್ತು ಕಾಶ್ಮೀರದಲ್ಲಿ 5.5 ತೀವ್ರತೆಯ ಭೂಕಂಪ ಸಂಭವಿಸಿದ್ದು, ವಾಯುವ್ಯ ಕಾಶ್ಮೀರದ ಕೆಲವು ಭಾಗಗಳಲ್ಲಿ ಸೋಮವಾರ ರಾತ್ರಿ 9:35 ರ ಸುಮಾರಿಗೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ.
ನ್ಯಾಷನಲ್ ಸೆಂಟರ್ ಫಾರ್ ಸೆಸ್ಮಾಲಜಿ (ಎನ್ಸಿಎಸ್) ಪ್ರಕಾರ, ಭೂಕಂಪದ ಕೇಂದ್ರ ಬಿಂದು ಲಡಾಖ್ನ ಕಾರ್ಗಿಲ್ನ ವಾಯುವ್ಯಕ್ಕೆ 148 ಕಿಮೀ ದೂರದಲ್ಲಿದ್ದು, ಕಂಪನದ ಆಳವು ಮೇಲ್ಮೈಯಿಂದ 10 ಕಿಮೀ ಕೆಳಗೆ ದಾಖಲಾಗಿದೆ ಎಂದು ತಿಳಿಸಿದೆ.
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಹಲವಾರು ಯೋಜನೆಗಳ ಉದ್ಘಾಟನೆ ಮತ್ತು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.