ನವದೆಹಲಿ, ಫೆ 20(DaijiworldNews/SK): ಪಂಜಾಬ್ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರೈತರ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡ ಅಮರಿಂದರ್ ಸಿಂಗ್ ಅವರು, ಪ್ರಧಾನಿ ಮೋದಿಯವರ ಬಳಿ ಪಂಜಾಬ್ ಗೆ ಸಂಬಂಧಿಸಿದ ವಿಷಯಗಳ ಜೊತೆಗೆ ರೈತರ ಸಮಸ್ಯೆಗಳ ಕುರಿತು ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ತಿಳಿಸಿದ್ದಾರೆ.
ಇದರೊಂದಿಗೆ ದೆಹಲಿ ಚಲೋ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತ ಮುಖಂಡರ ಬಳಿ ಮೆಕ್ಕೆಜೋಳ, ದ್ವಿದಳ ಧಾನ್ಯ ಮತ್ತು ಹತ್ತಿಯನ್ನು ಕನಿಷ್ಠ ಬೆಂಬಲ ಬೆಲೆ ನೀಡಿ ಸರ್ಕಾರದ ಸಂಸ್ಥೆಗಳ ಮೂಲಕ ಖರೀದಿಸುವ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಸೋಮವಾರ ಪ್ರತಿಭಟನಾನಿರತ ರೈತರ ಮುಂದಿಟ್ಟಿತ್ತು.
ಆದರೆ ಪ್ರತಿಭಟನೆಯಲ್ಲಿ ಭಾಗಿಯಾಗಿರುವ ರೈತ ಮುಖಂಡರು ಈ ಪ್ರಸ್ತಾವವನ್ನು ತಿರಸ್ಕರಿಸಿದ್ದಾರೆ. ಆದರೆ ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸುವುದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.