ಬೆಂಗಳೂರು, ಫೆ 20(DaijiworldNews/SK): ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರದಿಂದ ಬರುವ ಅನುದಾನ ಪಡೆಯಲು ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಮನವಿ ಸಲ್ಲಿಸದೇ, ರಾಜಕೀಯಕ್ಕಾಗಿ ಕೇಂದ್ರದ ವಿರುದ್ಧ ಆರೋಪ ಮಾಡಿ ರಾಜ್ಯದ ಜನತೆಗೆ ಸುಳ್ಳು ಸುದ್ದಿ ಹರಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರಕ್ಕೆ ವಿರುದ್ದ ಕಿಡಿಕಾರಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ ನಮ್ಮ ಸರ್ಕಾರ ಅಗತ್ಯ ಅನುಮತಿಗಳನ್ನು ನೀಡಿತ್ತು. ಈಗಲೂ ಕೇಂದ್ರದಿಂದ ಹಣ ನೀಡಲಾಗುತ್ತಿದೆ. ಅ ಬಗ್ಗೆ ಸರಿಯಾಗಿ ವಿಚಾರಿಸದೇ, ಪ್ರಯತ್ನ ಮಾಡದೇ ಅನುದಾನ ಬಂದಿಲ್ಲ ಎನ್ನುವುದು ಸರಿಯಲ್ಲ.
ಇನ್ನು ಭದ್ರಾ ಮೇಲ್ದಂಡೆ ಯೋಜನೆ ಹೊಸ ಯೋಜನೆ ಆಗಿರುವುದರಿಂದ ಎನ್ ಫಾರ್ಮ್ನಡಿ ಪ್ರಸ್ತಾವನೆ ಸಲ್ಲಿಸಬೇಕು. ಕಾಂಗ್ರೆಸ್ ಗೆ ಅನುದಾನ ಕೇಳುವುದು ಹೇಗೆ ಎಂದು ತಿಳಿದಿಲ್ಲ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.