ಬೆಂಗಳೂರು, ಫೆ 21 (DaijiworldNews/HR): ಕರ್ನಾಟಕದ ಹಿರಿಯ ಐಪಿಎಸ್ ಅಧಿಕಾರಿ ಸಿಎಚ್ ಪ್ರತಾಪ್ ರೆಡ್ಡಿ ಫೆಬ್ರವರಿ 09 ರಂದು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.
ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ (DGP) ಕಾರ್ಯ ನಿರ್ವಹಣೆ ಮಾಡುತ್ತಿದ್ದ ಪ್ರತಾಪ್ ರೆಡ್ಡಿ ವೈಯುಕ್ತಿಕ ಕಾರಣ ನೀಡಿ ರಾಜೀನಾಮೆ ನೀಡಿದ್ದು, ಇದೀಗ ಅವರ ರಾಜೀನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.
ಇನ್ನು ಮೂಲತಃ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯವರಾದ ಪ್ರತಾಪ್ ರೆಡ್ಡಿ, ಈ ಹಿಂದೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿಯೂ ಅವರು ಕಾರ್ಯ ನಿರ್ವಹಣೆ ಮಾಡಿದ್ದರು. 1991ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ ಅವರು ಈ ವರ್ಷದ ಜೂನ್ ಕೊನೆಯ ವಾರದಲ್ಲಿ ನಿವೃತ್ತರಾಗಲಿದ್ದರು. ಹೀಗಿರುವಾಗಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದರು.