ಚಂಡೀಗಢ, ಫೆ 21 (DaijiworldNews/ AK): ಹರಿಯಾಣದ ಖಾನೌರಿ ಗಡಿಯಲ್ಲಿ ಪ್ರತಿಭಟನಾ ನಿರತ ರೈತರೊಬ್ಬರು ಸಾವನ್ನಪ್ಪಿದ್ದು, ಪೊಲೀಸರೊಂದಿಗೆ ರೈತರು ಘರ್ಷಣೆಗಿಳಿದಿದ್ದಾರೆ.
23 ವರ್ಷದ ಶುಭಕರಣ್ ಸಿಂಗ್ ಮೃತ ರೈತ. ಇವರು ಬಟಿಂಡಾ ನಗರದ ನಿವಾಸಿಯಾಗಿದ್ದಾರೆ. ಪೊಲೀಸರು ರೈತರನ್ನು ಚದುರಿಸಲು ಅಶ್ರುವಾಯು ಸೇರಿದಂತೆ ವಿವಿಧ ರೀತಿಯ ಕ್ರಮಗಳನ್ನು ಅನುಸರಿಸುತ್ತಿದ್ದರು, ಈ ವೇಳೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ರೈತರ ಧರಣಿ, ಸತ್ಯಾಗ್ರಹ ಎರಡು ದಿನಗಳ ಕಾಲ ದೆಹಲಿಗೆ ಬರುವ ತಮ್ಮ ಪ್ರತಿಭಟನಾ ಮೆರವಣಿಗೆಯನ್ನು ಸ್ಥಗಿತಗೊಳಿಸಿದ್ದಾರೆ.
ಮೃತ ರೈತನಿಗೆ ಗುಂಡು ತಗುಲಿದೆ ಎಂದು ಪಟಿಯಾಲ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ ಖಾನೌರಿ ಗಡಿ ಪ್ರತಿಘಟನೆಯಲ್ಲಿ ಭಾಗವಹಿಸಿದ್ದ ರೈತರ ಪೈಕಿ ಮೂವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಒಬ್ಬರು ಆಸ್ಪತ್ರೆಗೆ ಕರೆತರುತ್ತಿದ್ದ ಮಾರ್ಗ ಮಧ್ಯದಲ್ಲೇ ಮೃತಪಟ್ಟಿದ್ದಾರೆ. ಉಳಿದ ಇಬ್ಬರ ಆರೋಗ್ಯ ಸ್ಥಿರವಾಗಿದೆ. ಹೆಚ್ಚಿನ ವಿವರಗಳನ್ನ ಮರಣೋತ್ತರ ಪರೀಕ್ಷೆಯ ಬಳಿಕವೇ ನೀಡಲಾಗುತ್ತದೆ ಎಂದು ಪಟಿಯಾಲದ ರಾಜೇಂದ್ರ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ರೇಖಿ ತಿಳಿಸಿದ್ದಾರೆ.