ಬೆಂಗಳೂರು, ಫೆ 22(DaijiworldNews/AA): ಈ ಹಿಂದೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಲಂಚ ಪಡೆದ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಮರುತನಿಖೆ ನಡೆಸಿ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ನ್ಯಾಯಾಲಯ ಸೂಚನೆ ನೀಡಿದೆ.
ಸಿಎಂ ಸಿದ್ಧರಾಮಯ್ಯ ವಿರುದ್ಧದ ಲಂಚ ಪಡೆದ ಆರೋಪ ಸಾಬೀತಾಗಿಲ್ಲವೆಂದು ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ ಆ ರಿಪೋರ್ಟ್ ಅನ್ನು ನ್ಯಾಯಾಲಯ ತಿರಸ್ಕರಿಸಿದೆ. ಇನ್ನು ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಈ ಬೆಳವಣಿಯು ಸಿಎಂ ಸಿದ್ಧರಾಮಯ್ಯ ಅವರಿಗೆ ಸಂಕಷ್ಟ ತರುವ ಸಾಧ್ಯತೆ ಇದೆ.
ಸಿಎಂ ಸಿದ್ದರಾಮಯ್ಯ ಲಂಚ ಪಡೆದಿರುವುದಾಗಿ ಬಿಜೆಪಿ ಮುಖಂಡ ಎನ್ಆರ್ ರಮೇಶ್ ಖಾಸಗಿ ದೂರು ದಾಖಲಿಸಿದ್ದರು. ಈ ದೂರಿನಲ್ಲಿ ಸಿದ್ಧರಾಮಯ್ಯ ಅವರು ಹುದ್ದೆಯೊಂದಕ್ಕೆ ನೇಮಕ ಮಾಡಲು ವ್ಯಕ್ತಿಯೊಬ್ಬರಿಂದ ಲಂಚ ಪಡೆದಿದ್ದಾರೆ ಎಂದು ತಿಳಿಸಲಾಗಿದೆ. ಇನ್ನು ನ್ಯಾಯಾಲಯದ ಆದೇಶವನ್ನು ಸಿಎಂ ಸಿದ್ಧರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರ ಹೇಗೆ ನಿಭಾಯಿಸುತ್ತದೆ ಎಂದು ಕಾದುನೋಡಬೇಕಿದೆ.