ನಗರ, ಫೆ 22 (DaijiworldNews/HR): ಕೇಂದ್ರೀಯ ತನಿಖಾ ದಳ (ಸಿಬಿಐ) ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಕೇಂದ್ರಾಡಳಿತ ಪ್ರದೇಶದಲ್ಲಿ ಹೈಡಲ್ ಯೋಜನೆಗೆ ಗುತ್ತಿಗೆ ನೀಡುವಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಗೆ ಸಂಬಂಧಿಸಿದಂತೆ ದಾಳಿ ನಡೆಸಿದೆ.
ಗುರುವಾರ ಮುಂಜಾನೆ ಅಧಿಕಾರಿಗಳ ತಂಡ ಸತ್ಯಪಾಲ್ ಮಲಿಕ್ ನಿವಾಸ ಸೇರಿದಂತೆ ಅವರಿಗೆ ಸಂಬಂದಿಸಿದ ಸುಮಾರು 30 ಕಡೆಗಳಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಶೋಧಿಸುತ್ತಿದೆ.
ಇನ್ನು ಕಿರು ಹೈಡ್ರೊ ಎಲೆಕ್ಟ್ರಿಕ್ ಪವರ್ ಪ್ರಾಜೆಕ್ಟ್ನ (ಎಚ್ಇಪಿ) ಸುಮಾರು 2,200 ಕೋಟಿ ಮೊತ್ತದ ಸಿವಿಲ್ ಕಾಮಗಾರಿಗಳನ್ನು ನೀಡುವಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.