ಬೆಂಗಳೂರು: ಫೆ 22 (DajiworldNews/AK): ಉದ್ಯೋಗಕ್ಕಾಗಿ ರಷ್ಯಾಕ್ಕೆ ತೆರಳಿದ್ದ ಕರ್ನಾಟಕ ಮೂಲದ ಯುವಕರನ್ನು ಯುದ್ಧಕ್ಕೆ ಬಳಸಿಕೊಂಡ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ನಮ್ಮ ಜಿಲ್ಲಾಧಿಕಾರಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಲಬುರಗಿ ಜಿಲ್ಲೆಯ ಮೂವರು ಯುವಕರು ರಷ್ಯಾಕ್ಕೆ ಹೋಗಿದ್ದ ಮಾಹಿತಿ ಇದೆ ಎಂದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, . ರಷ್ಯಾದಲ್ಲಿ ನಮ್ಮ ಯುವಕರನ್ನು ಸೇನೆಗೆ ಬಳಸಿಕೊಂಡ ಮಾಹಿತಿಯನ್ನು ನಮ್ಮ ಜಿಲ್ಲಾಧಿಕಾರಿ ನೀಡಿದ್ದಾರೆ.
ರಷ್ಯಾದ ವ್ಯಾಗ್ನರ್ ಗ್ರೂಪ್ಗೆ ಸೇರ್ಪಡೆ ಮಾಡಿಕೊಂಡ ಮಾಹಿತಿ ಇದೆ. ಕರ್ನಾಟಕ ಮಾತ್ರವಲ್ಲದೆ, ತೆಲಂಗಾಣ, ಉತ್ತರ ಭಾರತದ ಯುವಕರು ಸಿಲುಕಿರುವ ಮಾಹಿತಿ ಇದೆ. ಈ ವಿಚಾರವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗಮನಕ್ಕೆ ತಂದಿದ್ದು, ವಿದೇಶಾಂಗ ಸಚಿವರ ಜೊತೆ ಮಾತನಾಡುವಂತೆ ಮನವಿ ಮಾಡಿದ್ದೇನೆ ಎಂದು ಭರವಸೆನೀಡಿದರು.