ಮುಂಬೈ, ಫೆ 23 (DaijiworldNews/HR): ಶಿವಸೇನೆ ನಾಯಕ, ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಶುಕ್ರವಾರ ಮುಂಬೈನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಹೃದಯಾಘಾತದಿಂದ ಬಳಲುತ್ತಿದ್ದ ಅವರನ್ನು ಫೆಬ್ರವರಿ 21ರಂದು ಜೋಶಿ ಅವರನ್ನು ಐಸಿಯುಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದರು.
ಇನ್ನು ಕಳೆದ ವರ್ಷ ಮೇ ತಿಂಗಳಲ್ಲಿ ಮಿದುಳು ರಕ್ತಸ್ರಾವದಿಂದ ಬಳಲುತ್ತಿದ್ದ ಜೋಶಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.