ಮಂಡ್ಯ, ಫೆ 23 (DaijiworldNews/HR): ಈ ಬಾರಿಯ ಲೋಕಸಭೆಗೆ ನಾನು ಸ್ಪರ್ಧಿಸುವುದು ಖಚಿತ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮಂಡ್ಯ ಕ್ಷೇತ್ರ ಅಭ್ಯರ್ಥಿಯ ಬಗ್ಗೆ ಅಂತೆ ಕಂತೆ ಮೊದಲಿನಿಂದಲೂ ಇದೆ. ಅಧಿಕೃತ ನಿರ್ಧಾರ ಬರೋವರೆಗೂ ಕಾಯೋಣ ಎಂದರು.
ಇನ್ನು ನಾನು ನನ್ನ ಟಿಕೆಟ್ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯ ಜನರಿಗಾಗಿ. ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ ಇದೆ ಎಂದಿದ್ದಾರೆ.