ರಾಂಚಿ, ಫೆ 23 (DaijiworldNews/HR): ಗೃಹ ಸಚಿವ ಅಮಿತ್ ಶಾ ಅವರನ್ನು ಕೊಲೆ ಆರೋಪಿ ಎಂದು ಕರೆದಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್ ವಜಾಗೊಳಿಸಿದೆ ಎಂದು ವರದಿಯಾಗಿದೆ.
ಈ ಪ್ರಕರಣದ ವಿಚಾರಣೆಯನ್ನು ನ್ಯಾಯಮೂರ್ತಿ ಅಂಬುಜಾನಾಥ್ ನೇತೃತ್ವದ ಪೀಠವು ನಡೆಸಿದ್ದು, ರಾಹುಲ್ ಗಾಂಧಿ ಪರ ವಕೀಲರಾದ ಪಿಯೂಷ್ ಚಿತ್ರೇಶ್ ಮತ್ತು ದೀಪಂಕರ್ ರಾಯ್ ಅವರು ವಾದ ಮಂಡಿಸಿದ್ದಾರೆ.
ರಾಜಸ್ಥಾನದಲ್ಲಿ 2019ರ ಲೋಕಸಭಾ ಚುನಾವಣಾ ಪ್ರಚಾರ ಸಂದರ್ಭ ರಾಹುಲ್ ಅವರು ಅಮಿತ್ ಶಾ ಅವರನ್ನು ಕೊಲೆ ಆರೋಪಿ ಎಂದು ಕರೆದಿದ್ದರು.