ಬೆಂಗಳೂರು, ಫೆ 24 (DaijiworldNews/HR): ಸುಮಾರು ಮೂರು ವರ್ಷಗಳಿಂದ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯದಲ್ಲಿರುವ ಪತಿ-ಪತ್ನಿ ಯಾವುದೇ ಅಂತರ್ ಜಿಲ್ಲಾ ವರ್ಗಾವಣೆಯಾಗಿಲ್ಲ. ಹಾಗಾಗಿ ನಮಗೆ ನೆಮ್ಮದಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತಿಲ್ಲವೆಂದು ಪೊಲೀಸ್ ಸಿಬ್ಬಂದಿ ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಕರ್ನಾಟಕದ ಮೊಲೀಸ್ ಇಲಾಖೆಯಲ್ಲಿ ಸುಮಾರು ಮೂರು ವರ್ಷಗಳಿಂದ ಪತಿ-ಪತ್ನಿ ಯಾವುದೇ ಅಂತರ್ ಜಿಲ್ಲಾ ವರ್ಗಾವಣೆ ಆಗಿಲ್ಲ. ಸುಪ್ರೀಂಕೋರ್ಟ್ ಆದೇಶದಂತೆ ಮತ್ತು ಕೆಸಿಎಸ್ಆರ್ ನಿಯಮದ ಪ್ರಕಾರ, ಪತಿ-ಪತ್ನಿ ಯಾರು ಇರುತ್ತಾರೆ ಅವರು ಸುಪ್ರೀಂಕೋರ್ಟ್ ಆದೇಶ ಮತ್ತು ಕೆಸಿಎಸ್ಆರ್ ನಿಯಮದ ಪ್ರಕಾರ ಒಂದೆ ಘಟಕ ಹಾಗೂ ಒಂದೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿಯಮ ಇದೆ.
ಆದರೆ ಕಳೆದ 3 ವರ್ಷಗಳಿಂದ ಕರ್ನಾಟಕ ಸರ್ಕಾರವಾಗಲಿ, ರಾಜ್ಯ ಗೃಹ ಸಚಿವರಾಗಲಿ, ಪೊಲೀಸ್ ಮುಖ್ಯಸ್ಥರಾಗಲಿ ಯಾವುದೆ ವರ್ಗಾವಣೆ ಮಾಡುತ್ತಿಲ್ಲ. ಈ ವಿಚಾರವಾಗಿ ಸುಮಾರು 3 ವರ್ಷಗಳಿಂದ ಮಾನ್ಯ ಗೃಹ ಸಚಿವರಿಗೆ ಪತಿ-ಪತ್ನಿ ಪ್ರಕರಣದಲ್ಲಿ ಅಂತರ್ ಜಿಲ್ಲಾ ವಗಾವಣೆ ಮಾಡುವಂತೆ ಆನೇಕ ಬಾರಿ ಮನವಿನಲ್ಲಿಸಿದ್ದು, ಈ ವಿಚಾರವಾಗಿ ಶೀಘ್ರದಲ್ಲೇ ವರ್ಗಾವಣೆ ಮಾಡುತ್ತೇವೆ ಅಂತ ಮಾಧ್ಯಮಗಳ ಮುಂದೆ 3 ವರ್ಷಗಳಿಂದ ಹೇಳಿಕೆ ನೀಡಿರುತ್ತಾರೆ ವಿನಃ ಯಾವುದೆ ವರ್ಗಾವಣೆ ಮಾಡುತ್ತಿಲ್ಲ.
ಇನ್ನು ನಾವು 10 ರಿಂದ 15 ವರ್ಷಗಳ ಕಾಲ ತಂದೆ ತಾಯಿ ಹೆಂಡತಿ ಮಕ್ಕಳನ್ನು ಬಿಟ್ಟು, ನಾವು ಒಂದು ಕಡೆ, ಹೆಂಡತಿ ಒಂದು ಕಡೆ ಇರಬೇಕು. ಅದರಿಂದ ಅನೇಕ ಸಮಸ್ಯೆಗಳು ಎದುರಾಗುತ್ತಿದೆ. ನಮಗೆ ನೆಮ್ಮದಿ ಅನ್ನೋದು ಹಾಳಾಗಿ ಆರೋಗ್ಯದಲ್ಲಿ ತೊಂದರೆ ಉಂಟಾಗಿವೆ. ಆದ ಕಾರಣ ದಯಾಳುಗಳಾದ ತಾವುಗಳು ನಮಗೆ ಸಾಮೂಹಿಕ ಮರಣ ಪಡೆಯಲು ದಯಾಮಾಡಿ ದಯಾಮರಣ ಕಲ್ಪಿಸಿಕೊಂಡಬೇಕು ಎಂದು ಪೊಲೀಸ್ ಸಿಬ್ಬಂದಿ ಪತ್ರ ಬರೆದಿದ್ದಾರೆ.