ಕಲಬುರಗಿ, ಫೆ 24 (DaijiworldNews/HR): ಶಿವಮೊಗ್ಗದ ಹರ್ಷ ಹತ್ಯೆ ಪ್ರಕರಣದ ಆರೋಪಿಗಳು ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಎರಡು ಗುಂಪುಗಳ ಮಧ್ಯೆ ಗಲಾಟೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಇನ್ನು ಈ ಗಲಾಟೆಯಲ್ಲಿ ಎರಡು ಗುಂಪಿನ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.
ಇನ್ನು ಘಟನೆಯ ಬಳಿಕ ಡಿಸಿಪಿ ಕ್ರೈಂ ನೇತೃತ್ವದಲ್ಲಿ ಜೈಲಿನ ಮೇಲೆ ದಾಳಿ ನಡೆದಿದೆ. ದಾಳಿ ವೇಳೆ ಮಾರಾಕಾಸ್ತ್ರ 10 ಸಾವಿರ ನಗದು ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಫರಹತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.