ನವದೆಹಲಿ, ಫೆ 25(DajiworldNews/SK): ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಮೂರು ತಿಂಗಳ ಕಾಲ ಮಾಸಿಕ ಮನ್ ಕಿ ಬಾತ್ ಕಾರ್ಯಕ್ರಮದ ಪ್ರಸಾರ ಇರುವುದಿಲ್ಲ ಎಂದು ಪ್ರಧಾನಿ ಮೋದಿ ಭಾನುವಾರ ತಿಳಿಸಿದ್ದಾರೆ.
ಕಾರ್ಯಕ್ರಮದ 110 ನೇ ಸಂಚಿಕೆಯಲ್ಲಿ ಮಾತನಾಡಿದ ಅವರು, ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುವ ಹಿನ್ನೆಲೆಯಲ್ಲಿ ಆಯೋಗದ ನಿಯಮಾವಳಿಗಳನ್ನು ಗಮನದಲ್ಲಿ ಇಟ್ಟುಕೊಂಡು ತಮ್ಮ ರೇಡಿಯೋ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತ ಮಾಡಿದ್ದೇವೆ ಎಂದಿದ್ದಾರೆ.
ದೇಶದ ಸಮಗ್ರ ಶಕ್ತಿ ಹಾಗೂ ಸಾಧನೆಗಳನ್ನು ಬಿಂಬಿಸುವ ಕಾರ್ಯಕ್ರಮ ಇದಾಗಿದ್ದು, ಜನರ ಕಾರ್ಯಕ್ರಮವಾಗಿದ್ದು, ಜನರಿಗಾಗಿ ಹಾಗೂ ಜನರಿಂದಲೇ ನಡೆಯುವ ಕಾರ್ಯಕ್ರಮ ಎಂದು ಪ್ರಧಾನಿ ಮೋದಿ ಬಣ್ಣಿಸಿದ್ದಾರೆ.
ನಾವು ಮುಂದಿನ ಬಾರಿ ಭೇಟಿ ಮಾಡಿದಾಗ 111ನೇ ಮನ್ ಕಿ ಬಾತ್ ಕಾರ್ಯಕ್ರಮ ನಡೆಸಲಿದ್ದೇವೆ ಎಂದು ಪ್ರಧಾನಿ ಮೋದಿ ಅವರು ತಿಳಿಸಿದ್ದಾರೆ.