ಗಾಂಧಿನಗರ, ಫೆ 25(DajiworldNews/SK): ಇತರರ ಗ್ಯಾರಂಟಿಗಳು ಯಾವಾಗ ಕೊನೆಗೊಳ್ಳುತ್ತವೆಯೋ, ಅಂದಿನಿಂದ ಮೋದಿ ಗ್ಯಾರಂಟಿ ಆರಂಭವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.
23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 11,500 ಕೋಟಿ ರೂ. ವೆಚ್ಚದ 200ಕ್ಕೂ ಹೆಚ್ಚು ಆರೋಗ್ಯ ರಕ್ಷಣೆ ಮೂಲಸೌಕರ್ಯ ಯೋಜನೆಗಳಿಗೆ ಚಾಲನೆ ನೀಡಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದ 6-7 ದಶಕಗಳಲ್ಲಿ ನಡೆದಿದ್ದಕ್ಕಿಂತ ಹಲವು ಪಟ್ಟು ವೇಗವಾಗಿ ನಮ್ಮ ಸರ್ಕಾರದ ಅಡಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ.
ಇನ್ನು ಈ ಬಾರಿಯ ಚುನಾವಣೆಯಲ್ಲಿ ಗೆದ್ದರಂತೂ ಮೋದಿ ಗ್ಯಾರಂಟಿ ಪ್ರಾರಂಭವಾಗುತ್ತದೆ ಎಂದು ಆಶ್ವಾಸನೆ ನೀಡಿದ್ದಾರೆ.