ನವದೆಹಲಿ, ಫೆ 26(DajiworldNews/SK): ಇನ್ನೇನು ಕೆಲವೇ ತಿಂಗಳಿನಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ಈ 18ನೇ ಲೋಕಸಭೆ ಚುನಾವಣೆಯಲ್ಲಿ ಮೊದಲ ಬಾರಿ ಮತ ಹಾಕುವ ಮತದಾರರು ದೇಶಕ್ಕಾಗಿ ಮತ ಚಲಾಯಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.
ಭಾನುವಾರ 110 ನೇ ಮಾಸಿಕ ಮನ್ ಕಿ ಬಾತ್ನಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಯುವ ಜನತೆ ಕೇವಲ ರಾಜಕೀಯ ಚಟುವಟಿಕೆಗಳಲ್ಲಿ ಮಾತ್ರ ಭಾಗಿಯಾಗದೇ ಸಮಕಾಲೀನ ಚರ್ಚೆಗಳು ಹಾಗೂ ಸಂವಾದಗಳ ಕುರಿತೂ ಕೇಂದ್ರೀಕರಿಸಬೇಕು ಎಂದು ತಿಳಿಸಿದ್ದಾರೆ.
ನಿಮ್ಮ ಮೊದಲ ಮತ ದೇಶಕ್ಕಾಗಿ ಚಲಾವಣೆಯಾಗಬೇಕು ಎಂಬುದು ನೆನಪಿನಲ್ಲಿರಲಿ. ಚುನಾವಣಾ ಆಯೋಗ ಕೂಡ ‘ನನ್ನ ಮೊದಲ ಮತ ದೇಶಕ್ಕಾಗಿ’ ಎಂಬ ಆಂದೋಲನ ನಡೆಸುತ್ತಿದೆ. ಯುವಕರು ಮತದಾನದಲ್ಲಿ ದಾಖಲೆಯ ಪ್ರಮಾಣದಲ್ಲಿ ಭಾಗಿಯಾದರೇ ದೇಶಕ್ಕೆ ಲಾಭವಿದೆ’ ಎಂದು ಹೇಳಿದ್ದಾರೆ.
ಇನ್ನು ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಗಳು ಹಾಗೂ ಇನ್ನಿತರ ಪ್ರಭಾವಿ ವ್ಯಕ್ತಿಗಳು ಮೊದಲ ಬಾರಿ ಮತ ಚಲಾಯಿಸುವ ಮತದಾರರಿಗೆ ಮತದಾನ ಮಾಡುವುದಕ್ಕೆ ಪ್ರೋತ್ಸಾಹಿಸಬೇಕು ಎಂದೂ ಅವರು ಮನವಿ ಮಾಡಿದ್ದಾರೆ.